ಮಂಡ್ಯದಲ್ಲಿ ಗೆದ್ದ ಸುಮಲತಾ ಅವರಿಗೆ ‘ನಿಖಿಲ್’ ಏನ್ ಹೇಳಿದ್ರು ಗೊತ್ತೇ ನೋಡಿರಿ

0
147

ಕಳೆದ ವಾರ ಇಡೀ ಭಾರತ ದೇಶವೇ ಮಂಡ್ಯದ ಕಡೆ ನೋಡುತ್ತಿತ್ತು ಕಾರಣ ಎರಡು ಘಟಾನುಘಟಿಗಳ ಮಧ್ಯೆ ರಾಜಕೀಯದಲ್ಲಿ ಭಾರಿ ಪೈಪೋಟಿ ನಡೆದಿತ್ತು,ಕುಮಾರಸ್ವಾಮಿ ಅವರ ಮಗ ನಿಖಿಲ್ ಮತ್ತು ಸುಮಲತಾ ಅಂಬರೀಷ್ ಅವರು ಒಂದೇ ಕ್ಷೇತ್ರದಿಂದ ಸ್ಪರ್ದಿಸಿದ್ದರು.ಕೊನೆಗೂ ಫಲಿತಾಂಶ ಸುಮಲತಾ ಅವರ ಕಡೆ ಇದ್ದಿದ್ದರಿಂದ ನಿಖಿಲ್ ಅವರು ಸೋಲನ್ನುಂಡರೂ.ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಸುಮಲತಾ ಅಂಬರೀಷ್‌ಗೆ ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ್ದಾರೆ.ಅಲ್ಲದೇ ನಿನ್ನೆ ಪ್ರಮಾಣವಚನ ಸ್ವೀಕರಿಸಿದ ಕೇಂದ್ರ ಸಚಿವರಿಗೂ ನಿಖಿಲ್ ಶುಭಾಶಯ ಕೋರಿದ್ದಾರೆ.

ಮಂಡ್ಯದಿಂದ ಆಯ್ಕೆಯಾಗಿರುವ ಶ್ರೀಮತಿ ಸುಮಲತಾ ಅವರಿಗೆ ಅಭಿನಂದನೆ.ಕೇಂದ್ರ ಸರ್ಕಾರದಿಂದ ಅಗತ್ಯ ಬೆಂಬಲ,ನೆರವು ಸಿಗದೆ ನಮ್ಮ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ.ವಿಶೇಷ ನೆರವಿಗಾಗಿ ಬೇಡಿಕೆ ಹೊತ್ತು ರಾಜ್ಯಸರ್ಕಾರ ಕೇಂದ್ರಕ್ಕೆ ನಿಯೋಗಗಳನ್ನು ಕರೆದೊಯ್ದು.ಬರಿಗೈಯಲ್ಲಿ ಮರಳುತ್ತಿರುವುದನ್ನು ಕೂಡ ರಾಜ್ಯದ ಜನ ನೋಡುತ್ತಲೇ ಬಂದಿದ್ದಾರೆ.ಈಗ ಕೇಂದ್ರದಲ್ಲಿ ಆಳುವ ಪಕ್ಷದ ಬೆಂಬಲದೊಂದಿಗೆ ಇಲ್ಲಿ ನೀವು ಗೆದ್ದಿದ್ದೀರಿ.ನಮ್ಮ ರೈತರಿಗೆ ಅರ್ಹ ನೆರವು,ಯೋಜನೆಗಳನ್ನು ತರುವಲ್ಲಿ ತಾವು ಯಶಸ್ವಿಯಾಗುವಿರಿ ಎನ್ನುವುದು ಮಂಡ್ಯದ ಜನರ ನಿರೀಕ್ಷೆ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಗೆಲುವು ಸಾಧಿಸದೆ ಇರುವುದಕ್ಕೆ ನಾನೇ ಹೊಣೆ.ಇದಕ್ಕಾಗಿ ಯಾರನ್ನೂ ದೂಷಿಸುವುದಿಲ್ಲ.ಹಿನ್ನಡೆಗೆ ಕಾರಣಗಳನ್ನು ನೀಡುವ ಬದಲು ಅದರ ಸಂಪೂರ್ಣ ಜವಾಬ್ದಾರಿಯನ್ನು ನಾನೇ ಹೊತ್ತುಕೊಳ್ಳುತ್ತೇನೆ.ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ ಇಲ್ಲೆ ಇರುತ್ತೇನೆ.ಈ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ 5.77ಲಕ್ಷ ಜನರ ನಿರೀಕ್ಷೆಗಳಿಗೆ ನಾನು ಉತ್ತರದಾಯಿಯಾಗಿದ್ದೇನೆ.ಇನ್ನೂ ಹೆಚ್ಚಿನ ರೀತಿಯಲ್ಲಿ ಜನರ ಆಶೀರ್ವಾದ ಪಡೆಯುವ ನಿಟ್ಟಿನಲ್ಲಿ ನನ್ನ ಪ್ರಯತ್ನ ಮುಂದುವರಿಯಲಿದೆ ಎಂದಿದ್ದಾರೆ.

ಪಕ್ಷದ ಯಶಸ್ಸಿಗಾಗಿ ಶ್ರಮಿಸಿದ ಪ್ರತಿಯೊಬ್ಬ ಕಾರ್ಯಕರ್ತರ ಪರಿಶ್ರಮ ನಮ್ಮನ್ನು ಬೆಂಬಲಿಸಿದ ಜನರ ಪ್ರೀತಿಅಭಿಮಾನಗಳ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ.ನಮ್ಮ ಜೆಡಿಎಸ್ ಪಕ್ಷದ ಕಾರ್ಯಕರ್ತರ ಜೊತೆಗೆ ಪಕ್ಷ ಸಂಘಟನೆಯ ಕಾರ್ಯದಲ್ಲಿ ನಾನು ತೊಡಗಿಕೊಳ್ಳುತ್ತೇನೆ,ಜೆಡಿಎಸ್ ಪಕ್ಷದ ಬಲವರ್ಧನೆಗಾಗಿ ನನ್ನ ಪ್ರಯತ್ನ ಮುಂದುವರಿಯಲಿದೆ ನನ್ನನ್ನು ಬೆಂಬಲಿಸಿ ಆಶೀರ್ವದಿಸಿದ ಎಲ್ಲ ನನ್ನ ಮಂಡ್ಯದ ಬಂಧುಗಳಿಗೆ ಹಿರಿಯರಿಗೆ,ತಾಯಂದಿರಿಗೆ ಮತ್ತೊಮ್ಮೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here