ಕನ್ನಡ ಕಿರುತೆರೆಯ ಸುಪ್ರಸಿದ್ದ ನಟಿ ಇದೀಗ ಹಸೆಮಣೆ ಏರಲು ಸಿದ್ದರಾಗಿದ್ದಾರೆ. ಹೌದು ಇತ್ತೀಚೆಗೆ ಕಿರುತೆರೆ ಮತ್ತು ಬೆಳ್ಳಿತೆರೆಯ ಅನೇಕ ನಟಿಯರು ವೈವಾಹಿಕ ಜೀವನಕ್ಕೆ ಹೆಜ್ಜೆ ಇಡುತ್ತಿದ್ದಾರೆ. ಅವರ ಸಾಲಿಗೆ ಇದೀಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮಿ ಬಾರಮ್ಮಾ ಧಾರಾವಾಹಿ ಕನ್ನಡಿಗರ ಮನೆ ಮನದಲ್ಲಿ ಅಪಾರ ಜನಪ್ರಿಯತೆ ಪಡೆದುಕೊಂಡಿತ್ತು. ಈ ಧಾರಾವಾಹಿಯಲ್ಲಿ ಚಿನ್ನು ಎಂಬ ಪಾತ್ರದಲ್ಲಿ ನಟಿಸುತ್ತಿದ್ದ ನಟಿ ರಶ್ಮಿ ಪ್ರಭಾಕರ್ ಅವರು ತಮ್ಮ ಮುದ್ದಾದ ಅಭಿನಯದ ಮೂಲಕ ಕನ್ನಡ ಕಿರುತೆರೆ ವೀಕ್ಷಕರ ಮನಗೆದ್ದಿದ್ದರು. ನಟಿ ರಶ್ಮಿ ಪ್ರಭಾಕರ್ ಅವರು ಕೇವಲ ಕನ್ನಡ ಧಾರಾವಾಹಿ ಮಾತ್ರ ಅಲ್ಲದೆ ತೆಲುಗಿನಲ್ಲಿ ಕಾವ್ಯಾಂಜಲಿ ಎಂಬ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಕನ್ನಡ ಮತ್ತು ತೆಲುಗು ಕಿರುತೆರೆ ಲೋಕದಲ್ಲಿ ಸಖತ್ ಬಿಝಿಯಾಗಿರುವ ನಟಿ ರಶ್ಮಿ ಪ್ರಭಾಕರ್ ಇದರ ನಡುವೆ ತಮ್ಮ ವೈಯಕ್ತಿಕ ಬದುಕಿನ ಕುರಿತು ಸರ್ಪ್ರೇಸ್ ಸುದ್ದಿಯೊಂದನ್ನು ನೀಡಿದ್ದಾರೆ. ಹೌದು ನಟಿ ರಶ್ಮಿ ಪ್ರಭಾಕರ್ ಅವರು ಇದೇ ಏಪ್ರಿಲ್ 25ರಂದು ದಾಂಪತ್ಯ ಜೀವನಕ್ಕೆ ಹೆಜ್ಜೆ ಇಡಲಿದ್ದಾರೆ. ನಿಖಿಲ್ ಭಾರ್ಗವ್ ಎಂಬುವರೊಟ್ಟಿಗೆ ನಟಿ ರಶ್ಮಿ ಪ್ರಭಾಕರ್ ಅವರು ಸಪ್ತಪದಿ ತುಳಿಯಲಿದ್ದಾರೆ. ತಮ್ಮ ವಿವಾಹದ ಆಮಂತ್ರಣ ಪತ್ರಿಕೆಯನ್ನ ತಮ್ಮ ಚಿತ್ರೀಕರಣದ ನಡುವೆ ಬಿಡುವು ಮಾಡಿಕೊಂಡು ತಮ್ಮ ಎಲ್ಲಾ ಮಿತ್ರರಿಗೆ ಹಂಚುವ ಕೆಲಸದಲ್ಲಿ ತೊಡಗಿಕೊಂಡಿದ್ದಾರಂತೆ. ಈ ವಿಚಾರವನ್ನು ನಟಿ ರಶ್ಮಿ ಪ್ರಭಾಕರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ರಶ್ಮಿ ಅವರ ಭಾವಿ ಪತಿ ಆಗಿರುವ ನಿಖಿಲ್ ಅವರು ತಮ್ಮ ಪ್ರೀತಿಯ ಭವಿಷ್ಯದ ಬಾಳ ಸಂಗಾತಿಗೆ ಬ್ರೈಡ್ ಟು ಬಿ ಎಂದು ವಿಶೇಷವಾದ ಕೇಕ್ ಅನ್ನು ಕಟ್ ಮಾಡಿಸಿದ್ದಾರೆ.